ಬೆಳ್ತಂಗಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಏ. 7 ರಂದು ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ ಢಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
