ರಾಮಕುಂಜ:ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸಿದ 2026 ನೇ ಸಾಲಿನ ಜೆಇಇ ಮೈನ್ಸ್ ಪ್ರಥಮ ಹಂತದ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆರ್ ಪ್ರಣಂ ಮಿತ್ರ (96.6 percentile) ಮತ್ತು ಶೌರಿ ಯು ಕುಮಾರ್ (86.36 percentile) ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಕೆ ಇವರು "ಕಠಿಣ ಪರಿಶ್ರಮ ಮತ್ತು ನಿರಂತರ ಕಲಿಕೆಯನ್ನು ಅಭ್ಯಾಸ ಮಾಡಿದಾಗ ಅಸಾಮಾನ್ಯವಾದ ಸಾಧನೆಗಳನ್ನು ಖಂಡಿತವಾಗಿ ಮಾಡಬಹುದು ಎಂಬುದಕ್ಕೆ ಈ ವಿದ್ಯಾರ್ಥಿಗಳೇ ಸಾಕ್ಷಿ. ಪ್ರತಿಯೊಬ್ಬರೂ ಶ್ರದ್ಧೆಯಿಂದ ಅಧ್ಯಯನ ಮಾಡಿದಾಗ ಸಾಧನೆಯ ಶಿಖರವನ್ನು ಖಂಡಿತವಾಗಿಯೂ ಏರಬಹುದು. ವಿದ್ಯಾರ್ಥಿಗಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ" ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.
