ಮಾಣಿ : ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿ - ಎರಡು ಕಾರುಗಳ ಚಾಲಕರು ಸಣ್ಣ ಪುಟ್ಟ ಗಾಯಗಳಿಂದ ಪಾರು

|

ಮಾಣಿ: ಎರಡು ಕಾರುಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಾಣಿ ಜಂಕ್ಷನ್‌ನಲ್ಲಿ ನಡೆದಿದೆ.ಎರಡೂ ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎರಡೂ ಕಾರುಗಳ ಮುಂಭಾಗ ಸಂಪೂರ್ಣ ಜಖಂಗೊಂಡದೆ . ಮಾಣಿ ಫೈ ಓವರ್ ಕೆಳಭಾಗದಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಕಾರಿಗೆ, ಉಪ್ಪಿನಂಗಡಿ ಕಡೆಯಿಂದ ಸರ್ವಿಸ್ ರಸ್ತೆಯ ಮೂಲಕ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.