ಬೆಂಗಳೂರು 20-08-26 :ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐಷಾರಾಮಿ ಖಾಸಗಿ ಬಸ್, ಬೆಂಗಳೂರು-ಮೈಸೂರು ಹೆದ್ದಾರಿಯ ಲ್ಯಾಂಕೋ ಟೋಲ್ ಗೇಟ್ ಬಳಿ ಭೀಕರ ಅಪಘಾತಕ್ಕೀಡಾಯಿತು. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಹಾಗೂ ಅವರು ಬೆಲ್ಲೂರು ಏಮ್ಸ್ (AIIMS) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 'ಸುಗಮ ಟ್ರಾವೆಲ್ಸ್' ಬಸ್ ಹೆದ್ದಾರಿಯ ಬದಿಯಲ್ಲಿದ್ದ ಸೂಚನಾ ಫಲಕವೊಂದಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಸ್ತೂರಿ ಶಾನ್‌ಭಾಗ್ (64) ಮತ್ತು ಮಂಗಳೂರಿನ ಬಸ್ ಕ್ಲೀನರ್ ಅಶೋಕ್ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರು. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಲ್ಲೂರ್‌ನ ಏಮ್ಸ್ (AIIMS) ಆಸ್ಪತ್ರೆಗೆ ರವಾನಿಸಲಾಗಿದೆ.
