ಕಾಮಗಾರಿ ವೇಳೆ ಭೀಕರ ದುರಂತ; ಕಾರ್ಮಿಕನೋರ್ವ ಸ್ಥಳದಲ್ಲೇ ಸಾವು

|

ಶಿವಮೊಗ್ಗ: ನಗರದ ದೇವಸ್ಥಾನವೊಂದರ ಗೋಪುರ ನಿರ್ಮಾಣ ಕಾಮಗಾರಿ ವೇಳೆ ನಡೆದ ಭೀಕರ ಅಪಘಾತದಲ್ಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಉಪ್ಪಿನಂಗಡಿ ಸಮೀಪದ ನಾಗೇಶ್(48) ಮೃತಪಟ್ಟವರೆಂದು ಗುರುತಿಸಲಾಗಿದೆ. ನಗರದ ಹೊಸಮನೆ ಬಡಾವಣೆಯಲ್ಲಿರುವ ದೊಡ್ಡಮ್ಮ ಜಲದುರ್ಗಮ್ಮ ದೇವಸ್ಥಾನದ ಗೋಪುರ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ದೇವಸ್ಥಾನದ ಮುಂಭಾಗದಲ್ಲಿ ಕಲ್ಲುಗಳನ್ನು ಸಾಗಿಸುತ್ತಿದ್ದ ಕ್ರೇನ್ ರಿವರ್ಸ್ ಆಗಿ ಚಲಿಸುತ್ತಿದ್ದ ವೇಳೆ ನಾಗೇಶ್ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಅದೇ ಸಂದರ್ಭದಲ್ಲಿ  ಕ್ರೇನ್‌ನ ಮುಂಭಾಗದ ಚಕ್ರಗಳು ಅವರ ಮೇಲೆ ಹರಿದೆ. ತಲೆಯ ಮೇಲೆ ಚಕ್ರ ಹರಿದಿದ್ದರಿಂದ ತಲೆ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಾಗೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.