ಕೇರಳ ವಿಧಾನಸಭೆಯ ಅಧಿವೇಶನವು ಆರಂಭಗೊಂಡಿದ್ದು, ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜರುಗಿತು. ಈ ವೇಳೆ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಶಾಸಕ A.K.M ಅಶ್ರಫ್ ಕನ್ನಡ ಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇಡೀ ಸಭೆಯ ಗಮನ ಸೆಳೆದಿದ್ದಾರೆ ಮತ್ತು ಕನ್ನಡಿಗರ ಮನ ಗೆದ್ದಿದ್ದಾರೆ. ಹದಿನಾರನೇ ಕೇರಳ ವಿಧಾನಸಭೆಯ ಸದಸ್ಯರಾಗಿ ಅಧಿಕಾರ ವಹಿಸಿಕೊಂಡ UDF ಮೈತ್ರಿಕೂಟದ ಶಾಸಕ ಅಶ್ರಫ್.
