ಚತುಷ್ಪಥ ಕಾಮಗಾರಿ ಮತ್ತೆ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ, ಹೆದ್ದಾರಿ ಬಂದ್‌!

|

ನೆಲ್ಯಾಡಿ : ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಜುಲೈ 17ರಂದು ಗುಡ್ಡ ಜರಿದು ಮಣ್ಣು ಹೆದ್ದಾರಿಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.ಬಿ.ಸಿ.ರೋಡ್‌ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದ್ದು ಮಣ್ಣಗುಂಡಿಯಲ್ಲಿ ರಸ್ತೆಗಾಗಿ ಗುಡ್ಡ ಅಗೆಯಲಾಗಿದೆ. ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲವು ದಿನಗಳಿಂದ ಮಣ್ಣು ಜರಿಯುತ್ತಿದೆ. ಜುಲೈ. 17ರಂದು ಸುರಿದ ಭಾರೀ ಮಳೆಯಿಂದಾಗಿ ಗುಡ್ಡವು ಜರಿದು ಮರಗಳ ಸಮೇತ ರಸ್ತೆಗೆ ಬಿದ್ದಿದೆ. ಇದರಿಂದಾಗಿ ರಸ್ತೆ ಸಂಚಾರ ಬಾಧಿತವಾಯಿತು.ಮಣ್ಣು ತೆರವು ಕಾರ್ಯ ನಡೆಯುತ್ತಿದೆ.