ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ - ಬಸ್ಸು ಚಾಲಕ ಗಂಭೀರ

|

ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಎರಡು ಲಾರಿಗಳ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಗ್ಯಾಸ್ ಸಿಲಿಂಡ‌ರ್ ಹೊತ್ತಿದ್ದ ಲಾರಿ ಪರಸ್ಪರ ಡಿಕ್ಕಿಯಾಗಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಲಾರಿ, ಗ್ಯಾಸ್ ಲಾರಿಗೆ ಡಿಕ್ಕಿಯಾಗಿದೆ. ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಅಪಘಾತದ ಪರಿಣಾಮ ಚಾರ್ಮಾಡಿ ಘಾಟ್‌ನಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಗಿತ್ತು. ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.