ಬೆಳ್ತಂಗಡಿ: ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಉಜಿರೆಯಿಂದ ಕೊಟ್ಟಿಗೆಹಾರ ಕಡೆಗೆ ತೆರಳುತ್ತಿದ್ದ ಬಸ್ , ಹೇರ್ ಪಿನ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಆಂಧ್ರಪ್ರದೇಶ ಮತ್ತು ತುಮಕೂರಿನ ಪಾವಗಡ ನಿವಾಸಿಗಳು ಗಾಯಗೊಂಡ, ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ . ಸಹ ಪ್ರಯಾಣಿಕರು ಮತ್ತು ಸಾರ್ವಜನಿಕರು ಗಾಯಾಳುಗಳ ಸಹಾಯಕ್ಕೆ ಧಾವಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳು ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
