ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

|

ಬೆಳ್ತಂಗಡಿ: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪ‌ರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಾ.11ರಂದು ರಾತ್ರಿ ನಡೆದಿದೆ.ಮೃತ ಸವಾರನನ್ನು ಕಳೆಂಜದ ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.