ನೆಲ್ಯಾಡಿ : ಸ್ಕೂಟಿ ಮತ್ತು ಲಾರಿ ನಡುವೆ ಡಿಕ್ಕಿ - ಸ್ಕೂಟಿ ಸವಾರ ಸ್ಥಳದಲ್ಲಿಯೇ ಸಾವು - ಸಹ ಸವಾರೆ ಗಂಭೀರ

|

ನೆಲ್ಯಾಡಿ : ಮಂಗಳೂರು-  ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆಯಲ್ಲಿ ಇಂದು (ಬುಧವಾರ )ಮಧ್ಯಾಹ್ನ  ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಕೂಟಿಯ ಹಿಂಬಂದಿ ಸವಾರೆ  ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸ್ಕೂಟಿ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಹಾಗೂ ಗಾಯಾಳುವಿನ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ. ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರೆದಿದೆ