ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆ; ಆರೋಪಿ ಪರಾರಿ

|

ಬಂಟ್ವಾಳ 16/7/2026 : ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವತಿಯನ್ನು ಕಕ್ಯಪದವು ನಿವಾಸಿ  ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ,  ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ  ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.