ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ವಿಚಾರಕ್ಕೆ ನಟ ದೊಡ್ಡಣ್ಣ ದೂರು

|

ಬೆಂಗಳೂರು 17/06/26:ಹಿರಿಯ ನಟ ದೊಡ್ಡಣ್ಣ (doddanna) ನಿಧನ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಸೈಬರ್ ಠಾಣೆ (Cyber station) ಮೆಟ್ಟಿಲೇರಿದ್ದಾರೆ ನಟ ದೊಡ್ಡಣ್ಣ. ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗೇಡಿಗಳ ವಿರುದ್ಧ ದೂರು ನೀಡಿದ್ದಾರೆ .

ಬದುಕಿರುವಾಗಲೇ ಸತ್ತಿದ್ದಾರೆ ಎಂದು ಪೋಸ್ಟ್ ಹಂಚಲಾಗಿದೆ. ಎಐ ಮೂಲಕ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ. ಇದರಿಂದ ನನಗೆ ಮಾನಸಿಕ ನೋವು ಹಾಗೂ ಅತೀವ ಆಘಾತ ಉಂಟಾಗಿದೆ ಎಂದು ಹೇಳಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿ ವದಂತಿ ಹರಡಿದವರ ಮೇಲೆ ಕ್ರಮಕೈಗೊಳ್ಳುವಂತೆ ದೂರು ನೀಡಿದ್ದಾರೆ.